ಅಭಿಪ್ರಾಯ / ಸಲಹೆಗಳು

ಶಿವಾನಂದ ತಗಡೂರು

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ತಗಡೂರು ಗ್ರಾಮದಲ್ಲಿ 1971 ಜುಲೈ 1 ರಂದು ಜನನ.

      1990 ರಲ್ಲಿ ರೈತ ಚಳವಳಿಯತ್ತ ಆಕರ್ಷಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳು/ ಜನತೆಯ ಪರವಾಗಿ ಒಂದು ದಶಕಗಳ ಕಾಲ ನಿರಂತರ ಹೋರಾಟ.  ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ.

      1990 ರಲ್ಲಿ  ಹಾಸನ ಜಿಲ್ಲೆಯ ಜನಮಿತ್ರ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಪ್ರವೇಶ. ನಂತರ ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ.

      1999ರ ವಿಜಯಕರ್ನಾಟಕ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿ, 2012 ರಿಂದ ವಿಜಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ವಿಶೇಷ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 • 2006 ರಲ್ಲಿ ಪ್ರಪ್ರಥಮ ಬಾರಿಗೆ ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ.
 • ಬೇಲೂರಿನ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ, ಕರ್ನಾಟಕ ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ
 • 2011 ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ
 • 2014 ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಸ್ಥಾನ ಉಪಾಧ್ಯಕ್ಷರಾಗಿ ಆಯ್ಕೆ
 • 2018-21 ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆ
 • 2019 ಏಷ್ಯಾ ಅಂತರಾಷ್ಟ್ರೀಯ ಒಕ್ಕೂಟದ ಖಜಾಂಚಿಯಾಗಿ ಆಯ್ಕೆ
 • 2019 ರಲ್ಲಿ ಮೈಸೂರಿನಲ್ಲಿ (ಸುತ್ತೂರು) ಕೆಯುಡಬ್ಲ್ಯೂಜೆ 34ನೇ ರಾಜ್ಯ ಪತ್ರಕರ್ತರ ಸಮ್ಮೇಳನ
 • 2020ರಲ್ಲಿ ಮಂಗಳೂರಿನಲ್ಲಿ ಕೆಯುಡಬ್ಲ್ಯೂಜೆ 35ನೇ ರಾಜ್ಯ ಪತ್ರಕರ್ತರ ಯಶಸ್ವಿ ಸಮ್ಮೇಳನ

ಪ್ರಶಸ್ತಿಗಳು :

 • ಅತ್ಯುತ್ತಮ ರಾಜಕೀಯ ವಿಮರ್ಶಾತ್ಮಕ ವರದಿಗಾಗಿ ಕೆಯುಡಬ್ಲ್ಯೂಜೆ ನೀಡುವ ಖಾದ್ರಿ ಶಾಮಣ್ಣ ಪ್ರಶಸ್ತಿ, ಅತ್ಯುತ್ತಮ ಮಾನವೀಯ ವರದಿ, ಅತ್ಯುತ್ತಮ ಕ್ರೀಡಾ ವರದಿ ಸೇರಿದಂತೆ ಹಲವು ಪ್ರಶಸ್ತಿ. ಪತ್ರಿಕೋದ್ಯಮ ಸಾಧೆನೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ. ಮದರ್ ತೆರೇಸಾ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನ

ಪ್ರವಾಸ :

 • ಸಿಂಗಾಪುರ, ಶ್ರೀಲಂಕಾ, ದುಬೈ, ಅಬುದಾಬಿ, ಶಾರ್ಜಾ, ಮಾರಿಷಸ್ ಸೇರಿದಂತೆ ಹಲವಾರು ಬಾರಿ ಪತ್ರಕರ್ತರ ಸಂಘಟನೆ ವಿದೇಶ ಪ್ರವಾಸ.
 • ಶ್ರೀಲಂಕಾ ಪತ್ರಕರ್ತರ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗಿ, ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಆಹ್ವಾನಿತ ಅತಿಥಿಯಾಗಿ

ಮಾಧ್ಯಮ ಕ್ಷೇತ್ರ :

 • 1990 ರಲ್ಲಿಯೇ ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ವರದಿಗಾರನಾಗಿ ಸೇವೆ.
 • 1999 ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲಹಿರಿಯ ವರದಿಗಾರನಾಗಿ ಸೇವೆ.
 • 2012 ವಿಜಯವಾಣಿ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ಹಿರಿಯ ವಿಶೇಷ ವರದಿಗಾರರಾಗಿ ಸೇರ್ಪಡೆ.
 • 2004-2008 ರವರೆಗೆ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಣೆ.
 • ಅಧ್ಯಕ್ಷರಾಗಿದ್ದ ಅವಧಿಯಲ್ಲಿ /2007-08)ರಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಬಹಳ ವರ್ಷದ ಕನಸಾಗಿದ್ದ ಸುಸಜ್ಜಿತ ವ್ಯವಸ್ಥೆಯುಳ್ಳ 1 ಕೋಟಿ ಅಂದಾಜು ವೆಚ್ಚದ ಪತ್ರಕರ್ತರ ಭವನ ನಿರ್ಮಾಣ.

 

ಮೊಬೈಲ್ ನಂ : 9845087374

 

 

ಇತ್ತೀಚಿನ ನವೀಕರಣ​ : 08-11-2021 03:58 PM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080